ಉಡುಪಿ (ಜೂನ್ 25 ): ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಮಂಜುನಾಥ (53 ವರ್ಷ) ಎಂಬುವವರು ಚಿಕಿತ್ಸೆ ಫಲಕಾರಿಯಾಗದೇ ಮರಣ ಹೊಂದಿರುತ್ತಾರೆ.
ಮೃತರ ವಾರಸುದಾರರು ಯಾರಾದರು ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು (ದೂರವಾಣಿ: 0820-2520555/9449827833) ಸಂಪರ್ಕಿಸಲು ಸೂಚಿಸಿದೆ. ಹಾಗೂ ಪತ್ರಿಕೆಯಲ್ಲಿ ಪ್ರಕಟನೆಗೊಂಡ ದಿನಾಂಕದಿoದ 15 ದಿನಗಳ ಒಳಗೆ ವಾರಿಸುದಾರರು ಬಾರದಿದ್ದಲ್ಲಿ ಮೃತದೇಹವನ್ನು ಕಾನೂನು ರೀತಿಯಲ್ಲಿ ವಿಲೇವಾರಿ ಮಾಡಲಾಗುವುದು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕರು, ಜಿಲ್ಲಾಸ್ಪತ್ರೆ ಉಡುಪಿ ಅವರ ಪ್ರಕಟಣೆ ತಿಳಿಸಿದೆ.