ಉಡುಪಿ,(ಅಕ್ಟೋಬರ್ 31): ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ, ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜ.ಜಗದೀಶ್ ಪುಷ್ಪಾರ್ಚನೆ ಸಲ್ಲಿಸಿದರು.

     ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಜಿಲ್ಲಾ ಗಿರಿಜನ ಅಭಿವೃಧ್ದಿ ಯೋಜನಾಧಿಕಾರಿ ಲಲಿತಾ ಬಾಯಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.