ಉಡುಪಿ,(ಡಿಸೆಂಬರ್ 30) : ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ವತಿಯಿಂದ ಗುರುತಿಸಲಾದ ನೆರೆ ಸಂತ್ರಸ್ತ ಕುಟುಂಬಗಳಿಗೆ, ನೆರೆ ಪರಿಹಾರ ಸಾಮಾಗ್ರಿಗಳ ಕಿಟ್‌ಗಳನ್ನು ಜನವರಿ 2 ರಂದು ಅಪರಾಹ್ನ 4 ಗಂಟೆಗೆ ಕಡೆಕಾರಿನ ನಿಡಂಬೂರು ಯುವಕ ಮಂಡಲ ಇಲ್ಲಿ ವಿತರಿಸಲಾಗುವುದು.

    ಕಾರ್ಯಕ್ರಮದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಸಭಾಪತಿ ಡಾ. ತಲ್ಲೂರು ಶಿವರಾಮ ಶೆಟ್ಟಿ, ಉಪಸಭಾಪತಿ ಡಾ. ಅಶೋಕ್ ಕುಮಾರ್  ವೈ.ಜಿ, ಗೌರವ ಕಾರ್ಯದರ್ಶಿ ಕೆ. ಜಯರಾಮ ಆಚಾರ್ಯ ಸಾಲಿಗ್ರಾಮ, ಗೌರವ ಖಜಾಂಜಿ ಡಾ. ಅರವಿಂದ ನಾಯಕ್ ಅಮ್ಮುಂಜೆ ಮತ್ತು ರೆಡ್‌ಕ್ರಾಸ್ ಆಡಳಿತ ಮಂಡಳಿಯ ಸದಸ್ಯರುಗಳು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.