ಉಡುಪಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಶತಮಾನೋತ್ಸವ ದಿನಾಚರಣೆಯು ಮೇ 28 ರಂದು ಬೆಳಗ್ಗೆ ಬೆಳಿಗ್ಗೆ 10 ಗಂಟೆಗೆ ಅಜ್ಜರಕಾಡು ನಲ್ಲಿನ ರೆಡ್ ಕ್ರಾಸ್ ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ನ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ, ಮೀನುಗಾರಿಕೆ, ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ , ಜಿಲ್ಲಾಧಿಕಾರಿ ಜಿ.ಜಗದೀಶ್, ಉಡುಪಿ ಜಿಲ್ಲಾ ಘಟಕದ ಸಭಾಪತಿ ಎಸ್. ಬಸ್ರೂರು ರಾಜೀವ್ ಶೆಟ್ಟಿ ಭಾಗವಹಿಸಲಿದ್ದಾರೆ.

ರೆಡ್ ಕ್ರಾಸ್ ಸಂಸ್ಥೆಯ ಸಂಸ್ಥಾಪಕ ಸರ್ ಜೀನ್ ಹೆನ್ರಿ ಡ್ಯುನಾಂಟ್ ಅವರ ನೀತನ ಪ್ರತಿಮೆಯ ಅನಾವರಣ, ಶಾಸಕರ ಪ್ರದೇಶಾಭಿವೃದ್ದಿ ನಿಧಿಯಿಂದ ಗುರುತಿಸಲ್ಪಟ್ಟ ವಿಕಲಚೇತನ ಫಲನುಭವಿಗಳಿಗೆ ಕೃತಕ ಕಾಲುಗಳು, ಕ್ಯಾಲಿಫರ್, ಗಾಲಿಕುರ್ಚಿ, ತ್ರಿಚಕ್ರ ವಾಹನ ಮತ್ತು ಎಂ.ಆರ್.ಕಿಟ್ ಗಳ ವಿತರಣೆ, ಆಯ್ದ ಕೊರಗ ಕುಟುಂಬದ 350 ಫಲಾನುಭವಿಗಳಿಗೆ ದಿನಸಿ ಸಾಮಗ್ರಿಗಳ ಕಿಟ್ ಮತ್ತು ಔಷಧಿ ವಿತರಣೆ ಮತ್ತು ಕೋವಿಡ್ 19 ನಿಯಂತ್ರಣ ಹಾಗೂ ತಪಾಸಣಾ ಕಾರ್ಯಕ್ರಮದಲ್ಲಿ ಜಿಲ್ಲೆಯಾದ್ಯಂತ ನಿರಂತರವಾಗಿ ಭಾಗವಹಿಸಿರುವ ಎಲ್ಲಾ ಕಾರ್ಯಕರ್ತರು, ವೈದ್ಯರು, ದಾದಿಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು, ಪೊಲೀಸ್ ಸಿಬ್ಬಂದಿ ಮತ್ತು ಕೋವಿಡ್ ಸೈನಿಕರನ್ನು ಗುರುತಿಸಿ ಸನ್ಮಾನಿಸಲಾಗುವುದು.

ಕಾರ್ಯಕ್ರಮದಲ್ಲಿ ಉಡುಪಿ ಘಟಕದ ಉಪ ಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ, ಗೌರವ ಖಜಾಂಚಿ ಟಿ ಚಂದ್ರಶೇಖರ್, ಗೌರವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿರಲಿದ್ದಾರೆ ಎಂದು ಉಡುಪಿ ರೆಡ್ ಕ್ರಾಸ್ ನ ಪ್ರಕಟಣೆ ತಿಳಿಸಿದೆ.