ಉಡುಪಿ,(ಫೆಬ್ರವರಿ 23): ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ನವದೆಹಲಿರವರು 2021-22 ನೇ ಸಾಲಿನಲ್ಲಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿ / ಸಂಸ್ಥೆಗಳಿoದ ವಯೋಶ್ರೇಷ್ಠ ಸಮ್ಮಾನ್ 2021 ರಾಷ್ಟ್ರಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿರುತ್ತಾರೆ.

ಸದರಿ ಪ್ರಶಸ್ತಿಗೆ ಪ್ರಸ್ತಾವನೆ ಸಲ್ಲಿಸಲು ಮಾರ್ಚ್ 3 ಕೊನೆಯ ದಿನ, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://socialjustice.nic.in ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574810/ 811 ಅನ್ನು ಸಂಪರ್ಕಿಸುವAತೆ ಪ್ರಕಟಣೆ ತಿಳಿಸಿದೆ.