ಉಡುಪಿ (ಜೂನ್ 25): ಉಡುಪಿ ನಗರಸಭೆ ವ್ಯಾಪ್ತಿಯ ಬ್ರಹ್ಮಗಿರಿ ವೃತ್ತದಲ್ಲಿ ಒಟ್ಟು 5 ರಸ್ತೆಗಳು ಒಟ್ಟಾಗುತ್ತಿದ್ದು,  ವಾಹನಗಳ ಓಡಾಟ ಅಧಿಕವಾಗಿರುವುದರಿಂದ ಇಲ್ಲಿನ ರಸ್ತೆ ಬದಿಗಳಲ್ಲಿ ಸಾರ್ವಜನಿಕರು ತಮ್ಮ ವಾಹನಗಳನ್ನು ವೃತ್ತದ ಆಸುಪಾಸಿನ ರಸ್ತೆ ಬದಿಗಳಲ್ಲಿ ನಿಲ್ಲಿಸುತ್ತಿರುವುದರಿಂದ ಇತರ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದ್ದು ಅಫಘಾತಗಳು ಉಂಟಾಗುವ ಸಾಧ್ಯತೆಗಳು ಅಧಿಕವಾಗಿರುತ್ತದೆ.

        ಈ ಬಗ್ಗೆ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ತೀರ್ಮಾನಿಸಿದಂತೆ ಹಾಗೂ ಜಿಲ್ಲಾಧಿಕಾರಿ ಅವರ ಅಧಿಸೂಚನೆಯಂತೆ , ಉಡುಪಿ ನಗರಸಭೆ ವ್ಯಾಪ್ತಿಯ ಬ್ರಹ್ಮಗಿರಿ ವೃತ್ತದಲ್ಲಿ , ಆದರ್ಶ ಕಟ್ಟಡದ ಎದುರು ಏಕೆ ಸಾಲಿನಲ್ಲಿ , ದ್ವಿಚಕ್ರ ವಾಹನವನ್ನು ಹೊರತುಪಡಿಸಿ ಉಳಿದ ಇತರ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿರುತ್ತದೆ ಎಂದು ಉಡುಪಿ ನಗರಸಭೆಯ ಪೌರಾಯುಕ್ತ ಆನಂದ  ಕಲ್ಲೋಳಿಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.