ಉಡುಪಿ : ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಕಾರ್ಕಳ, ಪ್ರಾಥಮಿಕ ಆರೋಗ್ಯ ಕೇಂದ್ರ ಅಜೆಕಾರು ಮತ್ತು ಮುನಿಯಾಲು, ಸರ್ಕಾರಿ ಪದವಿ ಪೂರ್ವ ಕಾಲೇಜು ಮುನಿಯಾಲು, ಲಯನ್ಸ್ ಕ್ಲಬ್ ಮುನಿಯಾಲು, ಗ್ರಾಮ ಪಂಚಾಯತ್ ವರಂಗ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯು ಜುಲೈ 19 ರಂದು ಬೆಳಗ್ಗೆ 10.30 ಕ್ಕೆ ಮುನಿಯಾಲು ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.ಕಾರ್ಯಕ್ರಮವನ್ನು ಕಾರ್ಕಳ ತಾಲೂಕು ಪಂಚಾಯತ್ ಅಧ್ಯಕ್ಷೆ ಮಾಲಿನಿ.ಜೆ ಶೆಟ್ಟಿ ಉದ್ಘಾಟಿಸಲಿದ್ದು, ವರಂಗ ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ