ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ, ವಕೀಲರ ಸಂಘ (ರಿ) ಉಡುಪಿ, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳು, ವಿಶೇಷ ಶಿಕ್ಷಕರು ಮತ್ತು ಶಿಕ್ಷಕೇತರರ ಸಂಘ, ವಿಕಲಚೇತನರ ಸಂಘಟನೆಗಳು ಮತ್ತು ಪಾಲಕರ ಸಂಘಟನೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯು ಡಿಸೆಂಬರ್ 3 ರಂದು ಬೆಳಗ್ಗೆ 11 ಗಂಟೆಗೆ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನ(ಮಿನಿ ಹಾಲ್)ದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಉಡುಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.