ಉಡುಪಿ ಮಾರ್ಚ್ 5 (ಕರ್ನಾಟಕ ವಾರ್ತೆ): ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಮತ್ತು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮದ ಸಹಯೋಗದೊಂದಿಗೆ ರಾಷ್ಟ್ರೀಯ ಶ್ರವಣದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮದಡಿಯಲ್ಲಿ ವಿಶ್ವ ಶ್ರವಣ ದಿನದ ಬಗ್ಗೆ ಮಾಹಿತಿ ಕಾರ್ಯಕ್ರಮವು ಗುರುವಾರ ತೆಂಕನಿಡಿಯೂರು ಸಭಾಭವನದಲ್ಲಿ ನಡೆಯಿತು.

   ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಲ್ಪೆ ವಲಯದ ಅಧ್ಯಕ್ಷ ಸುಂದರ್ ಕಲ್ಮಾಡಿ, ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಮತ್ತು ರಾಷ್ಟ್ರೀಯ ಶ್ರವಣದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮದ ಅನುಷ್ಠಾನಾಧಿಕಾರಿ ಡಾ. ರಾಮ್‍ರಾವ್ ಶ್ರವಣದೋಷದ ಬಗ್ಗೆ ಅರಿವನ್ನು ಮೂಡಿಸಿದರು.

    ಉಡುಪಿ ಜಿಲ್ಲಾಸ್ಪತ್ರೆಯ ವಾಕ್ ಶ್ರವಣ ತಜ್ಞೆ ಅಕ್ಷತಾ.ವಿ ಮತ್ತು ಶ್ರವಣ ದೋಷವುಳ್ಳ ಮಕ್ಕಳ ಭೋದಕಿ ಸೌಜನ್ಯ. ಎಸ್ ಉಪಸ್ಥಿತರಿದ್ದರು.