ಉಡುಪಿ: ಸರ್ಕಾರಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ 2019-20 ನೇ ಸಾಲಿಗೆ ಸಂಬಂಧಿಸಿದಂತೆ, ಸ್ಪರ್ಧಾತ್ಮಕ ಪರೀಕ್ಷೆ ಬರೆದು ಅರ್ಹರಾದ ಅಭ್ಯರ್ಥಿಗಳ 1:2 ಅನುಪಾತದ ಪಟ್ಟಿಯನ್ನು ಇಲಾಖಾ ವೆಬ್ಸೈಟ್ನಲ್ಲಿ ಬೆಂಗಳೂರು ಕೇಂದ್ರೀಕೃತ ದಾಖಲಾತಿ ಘಟಕದ ವಿಶೇಷಾಧಿಕಾರಿ ಪ್ರಕಟಿಸಿರುತ್ತಾರೆ.
ಅರ್ಹತಾ ಪಟ್ಟಿಯಲ್ಲಿರುವಂತೆ ಜಿಲ್ಲೆಯಲ್ಲಿ ಆಯ್ಕೆಯಾಗಿರುವ ಸಮಾಜ ಪಾಠಗಳು ಹಾಗೂ ಗಣಿತ ಮತ್ತು ವಿಜ್ಞಾನ ವಿಷಯದಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನವೆಂಬರ್ 25 ರಂದು ಮತ್ತು ಆಂಗ್ಲ ವಿಷಯದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನವೆಂಬರ್ 26 ರಂದು ಉಪ ನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿ 1:2 ಪರಿಶೀಲನಾ ಪಟ್ಟಿಯಂತೆ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ನಡೆಯಲಿದೆ.
ಸಂಬಂಧಿಸಿದ ಅಭ್ಯರ್ಥಿಗಳು ಸಮರ್ಪಕ ಮೂಲ ದಾಖಲಾತಿಗಳೊಂದಿಗೆ ದ್ವಿಪ್ರತಿಯಲ್ಲಿ ಗೆಜೆಟೆಡ್ ಅಧಿಕಾರಿಯವರ ದೃಢೀಕೃತ ಪ್ರತಿ, ತಮ್ಮ ಇತ್ತೀಚಿನ 2 ಭಾವಚಿತ್ರ, ಸ್ವ-ವಿಳಾಸ ಮಾಹಿತಿ, ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆಯ ಮಾಹಿತಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಲಕೋಟೆಯಲ್ಲಿ ನಿಗಧಿಪಡಿಸಿದ ದಿನಗಳಂದು ಪರಿಶೀಲನೆಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 0820-2574878 ನ್ನು ಸಂಪರ್ಕಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.