ಉಡುಪಿ,  (ಕರ್ನಾಟಕ ವಾರ್ತೆ): ಸುಮಿತ್ರ (19) ಎಂಬುವವರು ಫೆ. 14 ರಂದು ಬೆಳಗ್ಗೆ ತನ್ನ ತಂಗಿಯ ಗಂಡನ ಮನೆಯಾದ ಉಳ್ಳೂರಿಗೆ ಹೋಗುವುದಾಗಿ ಹೇಳಿ ಹೋದವರು ಈವರೆಗೂ ಮನೆಗೂ ಬಾರದೇ, ತನ್ನ ತಂಗಿಯ ಹಾಗೂ ಸಂಬಂಧಿಕರ ಮನೆಗೂ ಹೋಗದೇ ಕಾಣೆಯಾಗಿರುವುದಾಗಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ

    ಚಹರೆ:  5 ಅಡಿ ಎತ್ತರ, ಸಾಧಾರಣ ಶರೀರ, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ  ಭಾಷೆ ಬಲ್ಲವರಾಗಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ದೂ.ಸಂಖ್ಯೆ: 08254-251033, ಬೈಂದೂರು ವೃತ್ತ ಪೊಲೀಸ್ ನಿರೀಕ್ಷಕರು ದೂ. ಸಂಖ್ಯೆ: 08254-251031 ಗೆ ಮಾಹಿತಿ ನೀಡುವಂತೆ ಬೈಂದೂರು ಪೊಲೀಸ್ ಠಾಣಾಧಿಕಾರಿಯವರ ಪ್ರಕಟಣೆ ತಿಳಿಸಿದೆ.