ಉಡುಪಿ :  ಉಡುಪಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ 1) ಮೆಟ್ರಿಕ್ ನಂತರದ ಬಾಲಕಿಯರ ನಿಲಯ ವೃತ್ತಿಪರ ಹಾಸ್ಟಲ್ ಹಾಗೂ 2) ಶ್ರೀಮತಿ ಇಂದಿರಾಗಾಂಧಿ ಮಹಿಳಾ ನರ್ಸಿಂಗ್ ನಿಲಯ, ಕುಂಜಿಬೆಟ್ಟು ಇಲ್ಲಿ ಮೆಟ್ರಿಕ್ ನಂತರದ ವೃತ್ತಿಪರ, ನರ್ಸಿಂಗ್, ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಬಾಲಕ /ಬಾಲಕಿಯರ ನಿಲಯಗಳನ್ನು ನಡೆಸಲಾಗುತ್ತಿದ್ದು, ಸದರಿ ನಿಲಯಗಳಲ್ಲಿ ಮೆಟ್ರಿಕ್ ನಂತರದ ವಿವಿಧ ವೃತ್ತಿಪರ ಕೋರ್ಸ್ / ತರಗತಿಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪ್ರವರ್ಗ 1, 2ಎ, 3ಎ, 3ಬಿ, ಪ.ಜಾತಿ ಮತ್ತು ಪ.ಪಂಗಡಗಳ ವಿದ್ಯಾರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ, ಹಾಗೂ ಪ್ರವರ್ಗ 2ಎ, 3ಎ, 3ಬಿ ಗೆ ಸೇರಿದ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 1 ಲಕ್ಷ ರೂ. ಒಳಗಿರಬೇಕು.

ನಿಲಯಗಳಿಗೆ ಪ್ರವೇಶ ಪಡೆಯ ಬಯಸುವ ವಿದ್ಯಾರ್ಥಿ/ ವಿದ್ಯಾರ್ಥಿನಿಯರು, ಜಾತಿ/ ಆದಾಯ ಪ್ರಮಾಣ ಪತ್ರ, 2018-19 ನೇ ಸಾಲಿನ ವಾರ್ಷಿಕ ಪರೀಕ್ಷೆಯ ಅಂಕಪಟ್ಟಿ, ಪಡಿತರ ಚೀಟಿ, ಆಧಾರ್ ಕಾರ್ಡ್, ವರ್ಗಾವಣೆ ಪ್ರಮಾಣ ಪತ್ರದ ದೃಢೀಕೃತ ಪ್ರತಿ, ವಾಸಸ್ಥಳದಿಂದ ಪ್ರವೇಶ ಕೋರಿರುವ ನಿಲಯಕ್ಕೆ ಇರುವ ದೂರದ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯಿತಿಯಿಂದ ಪಡೆದ ಪ್ರಮಾಣ ಪತ್ರ, 2 ಫೋಟೋಗಳೊಂದಿಗೆ ನಿಗಧಿತ ನಮೂನೆಯಲ್ಲಿ ಅರ್ಜಿಯನ್ನು ಆಗಸ್ಟ್ 22 ರ ಒಳಗೆ ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡಬೇಕು. ಅರ್ಜಿಗಳನ್ನು ಅಪ್‍ಲೋಡ್ ಮಾಡಿದ ನಂತರ ಕಂಪ್ಯೂಟರ್ ಪ್ರಿಂಟ್ ಸಹಿತ ದೃಢೀಕೃತ ದಾಖಲೆಗಳ ಪ್ರತಿಯನ್ನು ಉಡುಪಿ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2520739 ಅಥವಾ ವೆಬ್‍ಸೈಟ್ backwardclasses.kar.nic.in  ಸಂಪರ್ಕಿಸುವಂತೆ ಉಡುಪಿ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.