ಉಡುಪಿ (ಸೆಪ್ಟೆಂಬರ್, 22): ಜಿಲ್ಲಾ ಆರೋಗ್ಯ ಮತ್ತು ಕು.ಕ.ಇಲಾಖೆ, ರಾಷ್ಡ್ರೀಯ ಆರೋಗ್ಯ ಅಭಿಯಾನ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಿಯಡ್ಕ ಇವರ ಸಂಯುಕ್ತ ಆಶ್ರಯದಲ್ಲಿ ಹದಿಹರೆಯದವರಿಗೆ ಆರೋಗ್ಯ ಅರಿವು ಕಾರ್ಯಕ್ರಮವು ಮಂಗಳವಾರ ಹಿರಿಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು.

ಉಡುಪಿ ತಾಲೂಕು ಪಂಚಾಯತ್ ಅಧ್ಯಕ್ಷೆ ಸಂಧ್ಯಾ ಕಾಮತ್ ಕಾರ್ಯಕ್ರಮ ಉದ್ಘಾಟಿಸಿ, ಇಲಾಖೆ ವತಿಯಿಂದ ನಡೆಯುವ ಈ ರೀತಿಯ ಮಾಹಿತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅದರ ಸಂಪೂರ್ಣ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ತಿಳಿಸಿದರು.
ಪಂಚಾಯತ್ ನೂಡಲ್ ಅಧಿಕಾರಿ ಡಾ. ಉದಯ್ ಕುಮಾರ್ ಶೆಟ್ಟಿ, ಕರಪತ್ರ ಬಿಡುಗಡೆ ಮಾಡಿ, ಖಾಯಿಲೆ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ಖಾಯಿಲೆ ಬಾರದ ಹಾಗೆ ತಡೆಗಟ್ಟುವುದು ಉತ್ತಮ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಹಿರಿಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸತ್ಯ ಶಂಕರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವಿಜಯಬಾಯಿ ಕೆ. ಆಶಾ ಕಾರ್ಯಕರ್ತರು ಹಾಗೂ ಇಲಾಖಾ ಸಿಬ್ಬಂದಿಯವರು ಭಾಗವಹಿಸಿದ್ದರು.
ಅರ್ಚನಾ ಸ್ವಾಗತಿಸಿದರು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ನಿರೂಪಿಸಿದರು, ಮಧು ಕೆ.ಎನ್ ವಂದಿಸಿದರು.