ಮಂಗಳೂರು,(ಮಾರ್ಚ್ 05):- ಪ್ರಸ್ತುತ ಸಾಲಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ನಡೆಸಿದ ಕನ್ನಡ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ. ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಫಲಿತಾಂಶದ ಪಟ್ಟಿಯನ್ನು ಕಳುಹಿಸಿಕೊಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು ದೂ.ಸಂ. 26623584, 26612991, 26623584 ನ್ನು ಸಂಪರ್ಕಿಸುವಂತೆ ಗೌರವ ಕಾರ್ಯದರ್ಶಿ ಡಾ. ಪದ್ವರಾಜ ದಂಡಾವತಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.