ಮಂಗಳೂರು (ನವೆಂಬರ್ 2):- ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸ್ತುತ ಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವ ಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

   ಅರ್ಜಿ ಸಲ್ಲಿಸಲು ನವೆಂಬರ್ 12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ,  ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರೇಡಿಯೋ ಪಾರ್ಕ್ ಬಳಿ, ಉರ್ವಸ್ಟೋರ್ ಬಸ್ಸು ನಿಲ್ದಾಣದ ಹತ್ತಿರ, ಮಂಗಳೂರು ದೂ.ಸಂ: 0824-2456544 ಅಥವಾ ವೆಬ್‍ಸೈಟ್ ತಿತಿತಿ.ಜbಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಸಂಪರ್ಕಿಸಬಹುದೆಂದು ಎಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ :  ಅವಧಿ ವಿಸ್ತರಣೆ

ಮಂಗಳೂರು ನವೆಂಬರ್ 2 (ಕರ್ನಾಟಕ ವಾರ್ತೆ):- ಪ್ರಸ್ತುತ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನ ಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.

     ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಛೇರಿ, ಮೌಲನಾ ಅಝಾದ್ ಭವನ, ಓಲ್ಡ್‍ಕೆಂಟ್ ರಸ್ತೆ, ಪಾಂಡೇಶ್ವರ ಮಂಗಳೂರು ಇವರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.