ಚಿಕ್ಕಮಗಳೂರು:- ಕರ್ನಾಟಕ ರಾಜ್ಯ ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ ಸಚಿವರಾದ ಸನ್ಮಾನ್ಯ ಸಿ.ಟಿ ರವಿ ಅವರ ಜೊತೆಗೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಕಾರ್ಯಚಟುವಟಿಕೆಗಳು ಮತ್ತು ಮುಂದಿನ ಕಾರ್ಯಯೋಜನೆಗಳ ಬಗ್ಗೆ ವಿಸ್ತೃತವಾಗಿ ಸಮಾಲೋಚನೆ ನಡೆಸಲಾಯಿತು. ಚಿಕ್ಕಮಗಳೂರಿನಲ್ಲಿರುವ ಮಾನ್ಯ ಸಚಿವರ ನಿವಾಸದಲ್ಲಿ ನಡೆದ ಈ ಸಮಾಲೋಚನೆಯಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ. ಜಗದೀಶ್ ಪೈಯವರ ಜೊತೆಗೆ ಕೊಂಕಣಿ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಸಾಣೂರು ನರಸಿಂಹ ಕಾಮತ್ ರವರು ಉಪಸ್ಥಿತರಿದ್ದರು.