ಮಂಗಳೂರು,(ಮಾರ್ಚ್ 16):-ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ. ಅಂತೋಣಿ ಸೆಬಾಸ್ಟಿಯನ್ ಇವರ ಅಧ್ಯಕ್ಷತೆಯಲ್ಲಿ ಮಾಚ್ 17 ರಂದು ಬೆಳಿಗ್ಗೆ 10 ಗಂಟೆಗೆ ಆರ್.ಟಿ.ಇ-2009, ಪೋಕ್ಸೋ-2012 ಹಾಗೂ ಬಾಲನ್ಯಾಯ ಕಾಯಿದೆ-2015ರ ಅನುಷ್ಠಾನದ ಕುರಿತು ಭಾಗೀದಾರರೊಂದಿಗೆ ಸಮಾಲೋಚನಾ ಸಭೆ ಜರುಗಲಿದೆ.
ಅಂದು ಮಧ್ಯಾಹ್ನ 2 ಗಂಟೆಗೆ ಮಕ್ಕಳ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳ ವಿಚಾರಣೆಯ ಕಾರ್ಯಕಲಾಪ ನಡೆಸಲಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳೀಸಿದ್ದಾರೆ.