ಮಂಗಳೂರು,(ಡಿಸೆಂಬರ್ 19):- ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್ ಮಂಗಳೂರಿನ ಕೆಮಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

  ಆಸಕ್ತ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಕೆಮಿಕಲ್ ಇಂಜಿನಿಯರಿಂಗ್ ಪದವೀಧರರು ತಮ್ಮ ಅರ್ಜಿಯನ್ನು ಖುದ್ದಾಗಿ ಪಾಲಿಟೆಕ್ನಿಕ್‍ನ ಪ್ರಾಂಶುಪಾಲರಿಗೆ 10 ದಿನಗಳ ಒಳಗೆ ಸಲ್ಲಿಸಬೇಕು ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.