ಉಡುಪಿ,(ಮಾರ್ಚ್ 6): ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾರ್ಚ್ 7 ರಂದು ಜನ ಔಷಧಿ ದಿನಾಚರಣೆಯ ಪ್ರಯುಕ್ತ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡದ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರದಲ್ಲಿ ಬೆಳಗ್ಗೆ 10 ರಿಂದ 12 ಗಂಟೆಯ ವರೆಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಜನೌಷಧಿ ಪರಿಯೋಜನೆ ಬಗ್ಗೆ ಸಾರ್ವಜನಿಕರನ್ನು ಉದ್ದೇಶಿಸಿ ನೇರ ಸಂವಾದ ನಡೆಸಲಿರುವರು.
ಕಾರ್ಯಕ್ರಮವನ್ನು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆ ಸಚಿವ ಡಿ.ವಿ.ಸದಾನಂದ ಗೌಡ ಉದ್ಘಾಟಿಸಲಿರುವರು. ಕಾರ್ಯಕ್ರಮದಲ್ಲಿ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ. ಸುಧಾಕರ್, ಗೃಹ, ಕಾನೂನು, ಸಂಸದೀಯ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಸಚಿವ ಎಸ್.ಅಂಗಾರ, ಸಂಸದರುಗಳಾದ ಶೋಭಾ ಕರಂದ್ಲಾಜೆ, ಬಿ.ವೈ.ರಾಘವೇಂದ್ರ, ನಳೀನ್ ಕುಮಾರ್ ಕಟೀಲ್, ಶಾಸಕರುಗಳಾದ ವಿ.ಸುನೀಲ್ ಕುಮಾರ್, ಕೆ. ರಘುಪತಿ ಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ.ಆರ್.ಮೆಂಡನ್, ಬಿ.ಎಂ.ಸುಕುಮಾರ ಶೆಟ್ಟಿ, ಪುತ್ತೂರು ಶಾಸಕ ಸಂಜೀವ ಮಠಂದೂರು, ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ರಾಜೇಶ್ ನಾಕ್, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ಸ ದಸ್ಯರಾದ ಕೆ.ಪ್ರತಾಪ್‌ಚಂದ್ರ ಶೆಟ್ಟಿ, ಬಿ.ಎಂ.ಫಾರೂಕ್, ಕೆ.ಹರೀಶ್ ಕುಮಾರ್, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ರಾಜ್ಯ ಸಭಾ ಸದಸ್ಯ ಓಸ್ಕರ್ ಫೆರ್ನಾಂಡೀಸ್, ವಿಧಾನಪರಿಷತ್ ಶಾಸಕರುಗಳಾದ ಆಯನೂರು ಮಂಜುನಾಥ, ಎಸ್.ಎಲ್.ಭೋಜೆಗೌಡ, ಡಾ||ತೇಜಸ್ವಿನಿ ಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಬ್ರಹ್ಮಾವರತಾಲೂಕು ಪಂಚಾಯತ್ ಅಧ್ಯಕ್ಷೆ ಜ್ಯೋತಿ ಉದಯ ಪೂಜಾರಿ, ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗುಲಾಬಿ ಭಾಗವಹಿಸಲಿದ್ದಾರೆ.