ಕೋವಿಡ್-19 ಆತಂಕದ ನಡುವೆಯೂ ದ್ವಿತೀಯ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದ್ದ ರಾಜ್ಯ ಸರಕಾರವು ಇದೀಗ ಇದೇ ಜುಲೈ 30 ಮತ್ತು 31ರಂದು ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ನಡೆಸಲಿದೆ ಎಂಬುದಾಗಿ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿಎಸ್ ಅಶ್ವತ್ಥ್ ನಾರಾಯಣ್ ಸ್ಪಷ್ಟ ಪಡಿಸಿದ್ದಾರೆ.
ಪರೀಕ್ಷೆಯ ಸಮಯ ಬೆಳಗ್ಗೆ 10.30ರಿಂದ 11.50 ಗಂಟೆ ಹಾಗೂ ಮಧ್ಯಾಹ್ನ 2.30ರಿಂದ 3.30 ಗಂಟೆ ಎಂದು ಡಿಸಿಎಂ ಮಾಹಿತಿ ನೀಡಿದರು.
ಕೋವಿಡ್-19 ಪಾಸಿಟಿವ್ ಬಂದಿರುವ ವಿದ್ಯಾರ್ಥಿಗಳಿಗೂ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಅವರಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗುತ್ತದೆ.