ಉಡುಪಿ,(ಮಾರ್ಚ್ 27) : ಏಪ್ರಿಲ್ 5 ರಂದು ನಡೆಯುವ, ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ಜಯಂತಿ ಹಾಗೂ ಏಪ್ರಿಲ್ 14 ರಂದು ನಡೆಯುವ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ಅ ವರ ಜನ್ಮ ದಿನಾಚರಣೆ ಆಚರಣೆ ಕುರಿತಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅಧ್ಯಕ್ಷತೆಯಲ್ಲಿ, ಶುಕ್ರವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಪೂರ್ವಭಾವಿಸಭೆ ನಡೆಯಿತು.
ಡಾ. ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಸಾಧನೆಗಳ ಕುರಿತು ವಿಶೇಷ ಉಪನ್ಯಾಸ ಏರ್ಪಡಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಕೋವಿಡ್ ಮಾರ್ಗಸೂಚಿ ಉಲ್ಲಂಘನೆಯಾಗದAತೆ ನಿಗಧಿತ ಜನಸಂಖ್ಯೆಯ ಒಳಗೆ ಕಾರ್ಯಕ್ರಮವನ್ನು ಆಯೋಜಿಸುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ಸೂಚಿಸಿದರು.
ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯoದು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾಲಂಕಾರ ಮಾಡುವ ಕುರಿತಂತೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವಿವಿಧ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲೆಯ ವಿವಿಧ ದಲಿತ ಸಂಘಟನೆಗಳ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.