ಬಂಟ್ವಾಳ: ಡಿಕೆ ಶಿವಕುಮಾರ್ ರವರು KPCC ಅಧ್ಯಕ್ಷರಾಗಿ ಪದಗ್ರಹಣ ಮಾಡುವ “ಪ್ರತಿಜ್ಞೆ” ಕಾರ್ಯಕ್ರಮದ ಪೂರ್ವಭಾವಿ ಸಭೆ ಯುವ ಕಾಂಗ್ರೆಸ್ ಬಂಟ್ವಾಳ ವಿಧಾನಸಭಾ ಸಮಿತಿಯ ವತಿಯಿಂದ ಬಂಟ್ವಾಳ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಜಿಲ್ಲಾಧ್ಯಕ್ಷರಾದ ಮಿಥುನ್ ರೈಯವರು ಮಾತನಾಡಿ ಕಾರ್ಯಕ್ರಮದ ಮಾಡುವ ಕುರಿತು ಮಾಹಿತಿ ನೀಡಿದರು. ಸಭೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಹೈಲ್ ಕಂದಕ್, ವಿಧಾನಸಭಾ ಸಮಿತಿಯ ಅಧ್ಯಕ್ಷರಾದ ಪ್ರಶಾಂತ್ ಕುಲಾಲ್ ಮತ್ತು ವಿಧಾನಸಭಾ ಪದಾಧಿಕಾರಿಗಳು ಉಪಸ್ಥಿತರಿದ್ದರು.