ಉಡುಪಿ,(ಏಪ್ರಿಲ್ 19): ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಸೋಮವಾರ ಉಡುಪಿ ತಾಲೂಕಿನ ಬ್ರಹ್ಮಾವರ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ ಸೆಕ್ಷನ್ 4, 6 (ಎ) ಮತ್ತು 6(ಬಿ) ಅಡಿಯಲ್ಲಿ 36 ಪ್ರಕರಣ ದಾಖಲಿಸಿ 4300 ರೂ. ದಂಡ ವಸೂಲಿ ಮಾಡಿ, ಸೆಕ್ಷನ್ 4, 6 (ಎ) ಮತ್ತು 6(ಬಿ) ನಾಮಫಲಕಗಳನ್ನು ಸಹ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ್, ಆಹಾರ ಸುರಕ್ಷತಾ ಅಧಿಕಾರಿ ವೆಂಕಟೇಶ್, ಹಿರಿಯ ಆರೋಗ್ಯ ಸಹಾಯಕ ದೇವಪ್ಪ ಪಟಗರ್, ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ಮಂಜುನಾಥ, ಜಿಲ್ಲಾ ಕ್ಷಯರೊಗ ನಿಯಂತ್ರಣ ಘಟಕದ ವತಿಯಿಂದ ಹಿರಿಯ ಆರೋಗ್ಯ ಸಹಾಯಕ ಜಗದೀಶ್ ರಾವ್, ರಾಷ್ಟೀಯ ತಂಬಾಕು ನಿಯಂತ್ರಣಾ ಘಟಕದ ಎನ್.ಟಿ.ಸಿ.ಪಿ. ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ, ಅಸಾಂಕ್ರಾಮಿಕ ರೋಗಗಳ ಘಟಕದ ಜಿಲ್ಲಾ ಸಂಯೋಜಕಿ ಡಾ.ಅಂಜಲಿ ಮತ್ತು ಬ್ರಹ್ಮಾವರ ಪೋಲೀಸ್ ಠಾಣೆಯ ಆರಕ್ಷಕ ನಿಂಗಪ್ಪ ಉಪಸ್ಥಿತರಿದ್ದರು.