ಮಂಗಳೂರು: ಕನ್ನಡ ನಾಡು ನುಡಿಯ 63ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮವನ್ನು ದ.ಕ ಜಿಲ್ಲಾಡಳಿತವು ಇಂದಿಲ್ಲಿ ಭಾನುವಾರ ಬೆಳಿಗ್ಗೆ ಮಂಗಳೂರು ನೆಹರೂ ಮೈದಾನದಲ್ಲಿ ಸಂಭ್ರಮ ಸಡಗರದಿಂದ ಆಚರಿಸಿತು. ಈ ಶುಭಾವಸರದಲ್ಲಿ ಕರ್ನಾಟಕ ರಾಜ್ಯದ ಮುಜರಾಯಿ, ಮೀನುಗಾರಿಕೆ, ಬಂದರುಗಳು ಮತ್ತು ಒಳನಾಡು ಸಾರಿಗೆ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಸಂದೇಶ ನೀಡಿದರು.
2020ನೇ ಸಾಲಿನ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಫ್ರಾನ್ಸಿಸ್ ಮ್ಯಾಕ್ಸಿಮ್ ಮೋರಾಸ್ (ಪದವ್ ಮಂಗಳೂರು), ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಹಿರಿಯ ಪತ್ರಕರ್ತರಾದ ಬಿ.ಟಿ ರಂಜನ್ ಶೆಣೈ ಪುತ್ತೂರು, ಜಿನ್ನಪ್ಪ ಗೌಡ (ಬೆಳಾಲು ಬೆಳ್ತಂಗಡಿ) ಸೇರಿದಂತೆ ವಿವಿಧ ಸಂಸ್ಥೆಗಳನ್ನೊಳಗೊಂಡು ಸುಮಾರು 38 ಸಾಧಕ ಮಹಾನೀಯರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನಿಸಿ ಶುಭಾರೈಸಿದರು.
ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಸಂಸದ ನಳಿನ್‍ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಡಾ| ಭರತ್ ವೈ.ಶೆಟ್ಟಿ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‍ಸಾರ್, ಎಂಸಿಸಿ ಮೇಯರ್ ದಿವಾಕರ್ ಪಾಂಡೇಶ್ವರ್, ಉಪಮೇಯರ್ ವೇದಾವತಿ, ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ, ಪೋಲೀಸ್ ಆಯುಕ್ತ ವಿಕಾಶ್ ಕುಮಾರ್, ಜಿಲ್ಲಾ ಎಸ್ಪಿ ಶೈಲೇಶ್ ಬಲ್ಕವಾಡೆ, ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅದ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಮತ್ತಿತರ ಗಣ್ಯರು ಉಪಸ್ಥಿತರಿದ್ದು ಪುರಸ್ಕೃತರಿಗೆ ಅಭಿನಂದಿಸಿದರು.