ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮೂರು ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಜಿಲ್ಲೆಯ ಜನತೆಯಲ್ಲಿ ಮತ್ತೆ ಆತಂಕ ಮೂಡಿಸಿದೆ.

ಬಂಟ್ವಾಳದ ತುಂಬೆಯ 43 ವರ್ಷದ ನಿವಾಸಿ, ತೊಕ್ಕೊಟ್ಟಿನ 52 ವರ್ಷದ ನಿವಾಸಿ ಹಾಗೂ ದುಬೈಯಿಂದ ಮಂಗಳೂರಿಗೆ ಆಗಮಿಸಿದ್ದ ಉಡುಪಿ ಮೂಲದ ಮಹಿಳೆಯೊಬ್ಬರಲ್ಲಿ ಸೋಂಕು ಪತ್ತೆಯಾಗಿದೆ.

ಮೂರು ಹೊಸ ಪ್ರಕರಣ ಪತ್ತೆಯಾಗುವುದರ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟಾರೆ ಸೋಂಕಿತ ಪ್ರರಕಣಗಳು 12ಕ್ಕೇರಿದೆ.