ನವದೆಹಲಿ : ದೇಶದಲ್ಲಿ ಮಾರಕ ಕೊರೊನಾ ಸೋಂಕು ದಿನೇ ದಿನೇ ತಲ್ಲಣ ಸೃಷ್ಟಿಸುತ್ತಿದ್ದು, ವ್ಯಾಪಕವಾಗಿ ಹರಡುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 18,522 ಮಂದಿಯಲ್ಲಿ ಕೊರೊನಾ ಸೋಂಕು ಪಾಸಿಟಿವ್ ಬಂದಿದ್ದು, 418 ಮಂದಿ ಡೆಡ್ಲಿ ಸೋಂಕಿಗೆ ಬಲಿಯಾಗಿದ್ದಾರೆ.
ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವರದಿ ನೀಡಿದ್ದು, ದೇಶದಲ್ಲಿ ಒಂದೇ ದಿನ 18,522 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 418 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ದೇಶದಲ್ಲಿ ಈವರೆಗೆ ಮಾರಣಾಂತಿಕ ಸೋಂಕಿಗೆ ತುತ್ತಾದವರ ಸಂಖ್ಯೆ 5,66,840ಕ್ಕೆ ಏರಿಕೆಯಾಗಿದೆ. ಈ ಪೈಕಿ 3,34,822 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದು, 2,15,125 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ದೇಶದಲ್ಲಿ ಈವರೆಗೆ ಕಿಲ್ಲರ್ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 16,893 ಕ್ಕೆ ಏರಿಕೆಯಾಗಿದೆ.