ನವದೆಹಲಿ: ದೇಶದಲ್ಲಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 47,704 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14,83,157ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.
ಈ ನಡುವೆ ಒಂದೇ ದಿನ 654 ಮಂದಿ ಬಲಿಯಾಗಿದ್ದು, ದೇಶದಲ್ಲಿ ಕೊರೋನಾಗೆ ಸಾವನ್ನಪ್ಪಿದವರ ಸಂಖ್ಯೆ 33,425 ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ.
ಇನ್ನು 14,83,157 ಮಂದಿ ಸೋಂಕಿತರ ಪೈಕಿ 9,52,744 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿನ್ನೂ 4,96,988 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ.
ಮತ್ತೊಂದೆಡೆ ಮಹಾರಾಷ್ಟ್ರದಲ್ಲಿ ಹಲವು ದಿನಗಳ ಬಳಿಕ ಸೋಂಕು ಇಳಿಕೆ ಕಂಡಿದೆ. ದೆಹಲಿಯಲ್ಲಿ 2 ತಿಂಗಳಲ್ಲೇ ಕನಿಷ್ಟ 613 ಕೇಸ್ ದಾಖಲಾಗಿದೆ.
ಇನ್ನು ಕರ್ನಾಟಕದಲ್ಲಿ ನಿನ್ನೆ ಒಂದೇ ದಿನಕ್ಕೆ 5,324 ಕೋವಿಡ್-19 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ನಿನ್ನೆ ಸಾವನ್ನಪ್ಪಿದ್ದವರು 75 ಮಂದಿ. ರಾಜ್ಯದಲ್ಲಿ ಒಟ್ಟು 61,819 ಸಕ್ರಿಯ ಪ್ರಕರಣಗಳಿದ್ದು, ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡವರು1,847 ಮಂದಿ.
ಬೆಂಗಳೂರಿನಲ್ಲಿಯೇ 1,470 ಪ್ರಕರಣಗಳು ದೃಢಪಟ್ಟಿದ್ದರೆ, 26 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಒಟ್ಟು 33,815 ಸಕ್ರಿಯ ಪ್ರಕರಣಗಳಿವೆ. ನಿನ್ನೆ 784 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.