ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶವನ್ನು ನಾಳೆ ದಿನಾಂಕ 14.07.2020 ರಂದು ಬೆಳಿಗ್ಗೆ 11.30ಕ್ಕೆ ಪ್ರಕಟಿಸಲಾಗುವುದೆಂದು ಸಚಿವ ಎಸ್. ಸುರೇಶ್ ಕುಮಾರ್ ರವರು ಹೇಳಿದ್ದಾರೆ. ಇಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಕುರಿತಂತೆ ನಿರ್ದೇಶನ ನೀಡಲಾಗಿದೆ ಎಂದ ಸಚಿವರು ನಾಳೆ ಅಧಿಕೃತ ಫಲಿತಾಂಶ ಪ್ರಕಟಣೆಯ ಬಳಿಕ ಉತ್ತೀರ್ಣಗೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಮೂಲಕ ಸಂದೇಶ ರವಾನೆಯಾಗುವುದು.
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ನಾಳೆ ಮಧ್ಯಾಹ್ನ 12 ಗಂಟೆಯ ಬಳಿಕ ಸರ್ಕಾರದ ಅಧಿಕೃತ ಜಾಲತಾಣ www.karresults.nic.in ಗಳಲ್ಲಿಯೂ ಸಹ ವೀಕ್ಷಿಸಬಹುದೆಂದು ದಿನಾಂಕ 04.03.2020 ರಿಂದ 21.03.2020 ರವರೆಗೆ ವಿವಿಧ ವಿಷಯಗಳ ಪರೀಕ್ಷೆಗಳು ನಡೆದಿದ್ದು ನಂತರ ಕೋವಿಡ್-19 ಸಂದರ್ಭದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ದಿನಾಂಕ 18.06.2020 ರಂದು ಆಂಗ್ಲಭಾಷೆಯ ಪರೀಕ್ಷೆಗಳನ್ನು ನಡೆಸಿದ್ದನ್ನು ಸ್ಮರಿಸಬಹುದು. ಸುಮಾರು 6.75 ಲಕ್ಷ ವಿದ್ಯಾರ್ಥಿಗಳ ಫಲಿತಾಂಶ ನಾಳೆ ಹೊರಬೀಳಲಿದೆ ಎಂದು ಸಚಿವರು ಹೇಳಿದ್ದಾರೆ.