ಉಜಿರೆ: ಧರ್ಮಸ್ಥಳ ಗ್ರಾಮದ ನಿವಾಸಿ ಕೃಷ್ಣರಾಜಶೆಟ್ಟಿ (72) ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಧರ್ಮಸ್ಥಳ ದೇವಸ್ಥಾನದ ಕಾರ್ಯಾಲಯದಲ್ಲಿ ಲೆಕ್ಕಪತ್ರ ವಿಭಾಗದಲ್ಲಿ ಅವರು 46 ವರ್ಷ ಸೇವೆಸಲ್ಲಿಸಿ ಪ್ರಧಾನ ಲೆಕ್ಕಿಗರಾಗಿ ಇತ್ತೀಚೆಗೆ ನಿವೃತ್ತರಾಗಿದ್ದರು. ಲಕ್ಷ ದೀಪೋತ್ಸವ, ಮಹಾನಡಾವಳಿ, ಬಾಹುಬಲಿ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿಯೂ ಅವರು ಲೆಕ್ಕಪತ್ರ ವಿಭಾಗದಲ್ಲಿ ಉಸ್ತುವಾರಿ ಆಗಿ ಕಾರ್ಯನಿರ್ವಹಿಸಿದ್ದರು. ಅವರಿಗೆ ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಹಾಗೂ ಒಬ್ಬ ಮಗ ಇದ್ದಾರೆ.