ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ , ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾ.ಪಂ. ಮತ್ತು ಕಂದಾಯ ಇಲಾಖೆ ಹಾಗೂ ಇತರ ಸರಕಾರಿ ಇಲಾಖೆಗಳ ಸಹಯೋಗದೊಂದಿಗೆ ಸರಕಾರಿ ಪ್ರೌಢಶಾಲೆ ನಂದಾವರದಲ್ಲಿ ಜರಗಿದ ಕಾನೂನು ಸಾಕ್ಷರಥಾ ಮತ್ತು ಸಂಚಾರಿ ನ್ಯಾಯಾಲಯದ ಕಾನೂನು ಮಾಹಿತಿ ಶಿಬಿರವನ್ನು ಹಿರಿಯ ಸಿವಿಲ್ ನ್ಯಾಯಾಧೀ ಶ ಮತ್ತು ತಾ.ಕಾ.ಸೇ.ಸಮಿತಿ ಅಧ್ಯಕ್ಷ ಮಹಮ್ಮದ್ ಇಮ್ತಿಯಾಝ್ ಅಹಮ್ಮದ್ ಉದ್ಘಾಟಿಸಿದರು. ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು .
ಸಂಪನ್ಮೂಲ ವ್ಯಕ್ತಿ ಮುಖ್ಯೋಪಾಧ್ಯಾಯ ದೇವದಾಸ್ ಮಕ್ಕಳ ನಡೆ ಶಾಲೆ ಕಡೆ ಮತ್ತು ಸರಕಾರದ ಸೌಲಭ್ಯ ಗಳ ಕುರಿತು ಮಾಹಿತಿ ನೀಡಿದರು. ಶೈಲಜಾ ರಾಜೇಶ್ ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ಮಾಹಿತಿ ನೀಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಡಾ ಎಸ್.ಎಂ.ಗೋಪಾಲ್ ಕೃಷ್ಣ ಆಚಾರ್ , ಸಹಾಯಕ ಸರಕಾರಿ ವಕೀಲರಾದ ಸತೀಶ್ ಕುಮಾರ್ ಶಿವಗಿರಿ, ನ್ಯಾಯವಾದಿಗಳಾದ ಜಯರಾಮ್ ರೈ, ಸುರೇಶ್ ಕುಮಾರ್ ನಾವೂರು, ಆಶಾಮನಿ, ಗಣೇಶ್ ಪೈ, ಸತೀಶ್ ಬಿ., ಶಿಕ್ಷಕ ಉದಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.