ಉಡುಪಿ (ಸೆಪ್ಟೆಂಬರ್, 10): ಪ್ರಸ್ತುತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ನೀಡುವ ಕಾರ್ಯಕ್ರಮವನ್ನು ಅನುಷ್ಟಾನ ಮಾಡಲಾಗುತ್ತಿದ್ದು, ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

   ಅರ್ಜಿಯನ್ನು ನವೆಂಬರ್ 30 ರ ಒಳಗೆ ವೆಬ್‌ಸೈಟ್ www.sw.kar.nic.in ನಲ್ಲಿ ಸಲ್ಲಿಸಬಹುದಾಗಿದೆ.

    ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವAತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.