ಮಂಗಳೂರು,(ಮಾರ್ಚ್ 06):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳ ಸಮುದಾಯದ ಕ್ರೀಡಾಕೂಟ ಮತ್ತು ತರಬೇತಿ ಮಾರ್ಚ್ 7 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಜರಗಲಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಿಂದೂ ಧಾರ್ಮಿಕ ದತ್ತಿ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮೀನುಗಾರಿಕಾ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ರವರು ಧ್ವಜಾರೋಹಣ ನೆರವೇರಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ನಗರದ ದಕ್ಷಿಣ ಶಾಸಕರಾದ ಡಿ. ವೇದವ್ಯಾಸ ಕಾಮತ್ ರವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಲೋಕಸಭಾ ಸದಸ್ಯರಾದ ನಳೀನ್ ಕುಮಾರ್ ಕಟೀಲ್, ಶಾಸಕರುಗಳಾದ ಯು.ಟಿ. ಖಾದರ್, ಸಂಜೀವ ಮಠಂದೂರು, ಉಮಾನಾಥ್ ಎ. ಕೋಟ್ಯಾನ್, ಡಾ. ವೈ. ಭರತ್ ಶೆಟ್ಟಿ, ರಾಜೇಶ್ ನಾಯ್ಕ್ ಯು, ಹರೀಶ್ ಪೂಂಜಾ, ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಕೆ. ಪ್ರತಾಪಚಂದ್ರ ಶೆಟ್ಟಿ, ಪ್ರತಾಪ್ ಸಿಂಹ ನಾಯಕ್, ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್.ಎಲ್ ಭೋಜೇಗೌಡ, ಮಹಾನಗರಪಾಲಿಕೆ ಸದಸ್ಯೆ ಸಂಧ್ಯಾ ಎಂ. ಆಚಾರ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಕಸ್ತೂರಿ ಪಂಜ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಧನಲಕ್ಷ್ಮೀ ಗಟ್ಟಿ ಉಪಸ್ಥಿತರಿರುವರು.