ನವದೆಹಲಿ : ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಕರ್ನಾಟಕದಲ್ಲಿ ಪ್ರಥಮ ಹಾಗೂ ದ್ವಿತೀಯ ವರ್ಷದ ಪದವಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಆದರೆ ಅಂತಿಮ ವರ್ಷದ ಪರೀಕ್ಷೆಯನ್ನು ನಡೆಸಲು ವಿವಿಗಳಿಗೆ ಸೂಚಿಸಲಾಗಿದೆ,
ಆದರೆ ಕೊರೊನಾ ಸೋಂಕಿನ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಅಂತಿಮ ವರ್ಷದ ಪರೀಕ್ಷೆಗಳನ್ನು ಕೂಡ ಮಹಾರಾಷ್ಟ್ರ ಸರ್ಕಾರ ರದ್ದುಗೊಳಿಸಿದೆ. ಸಿಎಂ ಉದ್ದವ್ ಠಾಕ್ರೆ ನೇತೃತ್ವದಲ್ಲಿ ನಡೆದ ವಿಪತ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ,
ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ ಎಂಬ ಯುಜಿಸಿ ನಿರ್ದೇಶನದ ಬಳಿಕ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿ ಅಂತಿಮ ವರ್ಷದ ಪರೀಕ್ಷೆ ನಡೆಸದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿ ಇಂತಹ ಅಪಾಯಕಾರಿ ನಿರ್ಧಾರ ತೆಗೆದುಕೊಳ್ಳಲು ಸಿದ್ದವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ದೇಶದಲ್ಲಿ ಮಹಾಮಾರಿ ಕೊರೊನಾ ತಾಂಡವವಾಡುತ್ತಿದ್ದು, ಈ ಹಿನ್ನೆಲೆ ಕೆಲವು ರಾಜ್ಯಗಳು ಎಲ್ಲಾ ಪರೀಕ್ಷೆಯನ್ನು ರದ್ದುಗೊಳಿಸಿದ್ರೆ, ಇನ್ನ ಕೆಲವು ರಾಜ್ಯಗಳು ಪರೀಕ್ಷೆ ನಡೆಸಲು ಸಜ್ಜಾಗುತ್ತಿದೆ. ಕರ್ನಾಟಕದಲ್ಲಿ ಪ್ರಥಮ ಹಾಗೂ ದ್ವಿತೀಯ ವರ್ಷದ ಪದವಿ, ಎಂಜಿನಿಯರಿಂಗ್ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಆದರೆ ಅಂತಿಮ ವರ್ಷದ ಪರೀಕ್ಷೆಯನ್ನು ನಡೆಸಲು ವಿವಿಗಳಿಗೆ ಸೂಚಿಸಲಾಗಿದೆ,