ಪುತ್ತೂರು : ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದಿಂದ ಮಾನ್ಯತೆ ಪಡೆದಿರುವ ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ ಕಳೆದ ಜೂನ್ ತಿಂಗಳಲ್ಲಿ ನಡೆಸಿರುವ ರಾಷ್ಟ್ರೀಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಯುಜಿಸಿ ಎನ್‍ಇಟಿ)ಯಲ್ಲಿ ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರತಿಭಾ ತೇರ್ಗಡೆಯಾಗಿರುತ್ತಾರೆ. ಇವರು ಮೂರು ವರ್ಷಗಳಿಂದ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.