ಪುತ್ತೂರು:  ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಆಶ್ರಯದಲ್ಲಿ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮರ್ದೂರಡ್ಕದಲ್ಲಿ ಆಯೋಜಿಸಲಾದ ಶೈಕ್ಷಣಿಕ ಗ್ರಾಮೀಣ ಶಿಬಿರ 2020 ಇದರಲ್ಲಿ ಸ್ವಚ್ಛತೆ, ಆರೋಗ್ಯ, ಶಿಕ್ಷಣ ಮತ್ತು ಮದ್ಯಪಾನದ ಕುರಿತು ಸಮುದಾಯಕ್ಕೆ ಅರಿವು ಮೂಡಿಸುವ ಉದ್ದೇಶದಿಂದ ಎರಡು ಪ್ರತ್ಯೇಕ ಬೀದಿ ನಾಟಕಗಳನ್ನು ಪ್ರದರ್ಶಿಸಲಾಯಿತು.

‘ಸ್ವಚ್ಛತೆ ಮತ್ತು ಆರೋಗ್ಯ’ ಎಂಬ ಬೀದಿ ನಾಟಕವನ್ನು ಮರ್ದೂರಡ್ಕದ ಪರಿಶಿಷ್ಟ ಜಾತಿಯ ಕಾಲೊನಿಯಲ್ಲಿ ಪ್ರದರ್ಶಿಸಲಾಯಿತು. ಇದರಲ್ಲಿ ವಿದ್ಯಾರ್ಥಿಗಳು ವೈಯಕ್ತಿಕ ಸ್ವಚ್ಛತೆ, ಪರಿಸರ ಸ್ವಚ್ಛತೆ, ಮನೆ ಸ್ವಚ್ಛತೆ, ಆಹಾರ ಸ್ವಚ್ಛತೆ ಮತ್ತು ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳನ್ನು ಬೀದಿ ನಾಟಕದ ಮೂಲಕ ಜನರಲ್ಲಿ ಅರಿವನ್ನು ಮೂಡಿಸಿದರು.

ಮದ್ಯಪಾನ ಹಾಗೂ ದುಶ್ಚಟಗಳ ಪರಿಣಾಮಗಳ ಕುರಿತು ಮತ್ತು ಶಿಕ್ಷಣದ ಪ್ರಾಮುಖ್ಯತೆಯನ್ನು ಸಾರುವ ಬೀದಿ ನಾಟಕವನ್ನು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮರ್ದೂರಡ್ಕದಲ್ಲಿ ಪ್ರದರ್ಶಿಸಲಾಯಿತು. ಈ ಬೀದಿ ನಾಟಕದ ಪ್ರದರ್ಶನವನ್ನು 100 ಕ್ಕೂ ಹೆಚ್ಚು ಜನ ವೀಕ್ಷಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಶಿಬಿರಾಧಿಕಾರಿಗಳಾದ ದೀಪಿಕಾ ಎಮ್, ಸಚಿನ್ ಕುಮಾರ್, ಶೀತಲ್ ಕುಮಾರ್, ಶಿಬಿರದ ನಾಯಕ ನಿರಂಜನ್ ಕೆ ಮಾರ್ಗದರ್ಶನ ನೀಡಿದರು.