ಪುತ್ತೂರು: ಮಂಗಳೂರು ವಿವಿಯು ಕಳೆದ ಮೇ/ಜೂನ್ ತಿಂಗಳಲ್ಲಿ ನಡೆಸಿದ ಸ್ನಾತಕೋತ್ತರ ವಿಭಾಗದ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ಸಂತ ಫಿಲೋಮಿನಾ ಕಾಲೇಜಿನ ಗಣಕ ವಿಜ್ಞಾನ ಸ್ನಾತಕೋತ್ತರ ವಿಭಾಗದ ಚತುರ್ಥ ಸೆಮಿಸ್ಟರ್ ಪರೀಕ್ಷೆಗೆ ಹಾಜರಾದ ಎಲ್ಲಾ 16 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.    

ದ್ವಿತೀಯ ಸೆಮಿಸ್ಟರ್ ಪರೀಕ್ಷೆಗೆ ಹಾಜರಾದ ಒಟ್ಟು 17 ವಿದ್ಯಾರ್ಥಿಗಳಲ್ಲಿ 15 ಮಂದಿ ವಿಶಿಷ್ಟ ಶ್ರೇಣಿ ಮತ್ತು 2 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ನಮಿಶಾ ಎಸ್ ರಾವ್ ಶೇಕಡಾ 92 ಅಂಕಗಳೊಂದಿಗೆ ಪ್ರಥಮ ಸ್ಥಾನ ಮತ್ತು ಪ್ರೀತಿ ರಾವ್ ಶೇಕಡಾ 90 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.

ಕಾಲೇಜಿನ ಪ್ರಾಚಾರ್ಯ ಪ್ರೊ. ಲಿಯೋ ನೊರೊನ್ಹಾ, ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮುಖ್ಯಸ್ಥ ವಂ| ಡಾ| ಆ್ಯಂಟನಿ ಪ್ರಕಾಶ್ ಮೊಂತೆರೊ, ವಿಭಾಗ ಸಂಯೋಜಕ ಗೋವಿಂದ ಪ್ರಕಾಶ್ ಮತ್ತು ಪ್ರಾಧ್ಯಾಪಕ ವೃಂದದವರು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.