ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಸಮಾಜಕಾರ್ಯ ವಿದ್ಯಾರ್ಥಿಗಳು ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ದೊರೆಯುವ ವಿವಿಧ ನಮೂನೆಯ ಆರೋಗ್ಯ ಸೌಲಭ್ಯಗಳ ಕುರಿತು ಅಧ್ಯಯನ ನಡೆಸುವ ಉದ್ದೇಶದಿಂದ ಪುತ್ತೂರಿನ ಸರಕಾರಿ ಅಸ್ಪತ್ರೆಗೆ ಭೇಟಿ ನೀಡಿದರು.

ಈ ಅಧ್ಯಯನ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಆಪ್ತ ಸಮಾಲೋಚಕರಾಗಿರುವ ತಾರನಾಥ್ ಇವರು ಸರಕಾರಿ ಆಸ್ಪತ್ರೆಯ ಕಾರ್ಯ ವೈಖರಿ, ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಸಮಾಜ ಕಾರ್ಯಕರ್ತರ ಪ್ರಾಮುಖ್ಯತೆಯ ಮುಂತಾದ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.  ಮಾತ್ರವಲ್ಲದೆ ಆಸ್ಪತ್ರೆಯ ಎಲ್ಲಾ ವಿಭಾಗಗಳಿಗೆ ವಿದ್ಯಾರ್ಥಿಗಳನ್ನು ಭೇಟಿ ಮಾಡಿಸಿ, ಸೌಲಭ್ಯಗಳ ಕುರಿತು ವಿವರ ನೀಡಿದರು.

ಕಾಲೇಜಿನ ಸಮಾಜ ಕಾರ್ಯ ವಿಭಾಗದ ಸಂಯೋಜಕಿ ಶ್ರೀಮಣಿ ಇವರ ಮಾರ್ಗದರ್ಶನದಲ್ಲಿ ಸಹಾಯಕ ಪ್ರಾಧ್ಯಾಪಕರಾದ ಪ್ರತಿಭಾ ಕೆ ಮತ್ತು ದೀಪಿಕಾ ಎಮ್ ಕಾರ್ಯಕ್ರಮ ಸಂಯೋಜಿಸಿದರು.