ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಮತ್ತು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಕೃಷ್ಣನಗರ, ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ವೈಯಕ್ತಿಕ ಸ್ವಚ್ಛತೆ ಕುರಿತು ಮಾಹಿತಿ ಕಾರ್ಯಕ್ರಮ ಅಕ್ಟೋಬರ್ 17ರಂದು ಶಾಲಾ ಸಭಾಂಗಣದಲ್ಲಿ ಜರಗಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸಂತ ಫಿಲೋಮಿನಾ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ದಿನಕರ ಅಂಚನ್ ಮಾತನಾಡಿ, ವೈಯಕ್ತಿಕ ಸ್ವಚ್ಛತೆ, ಪರಿಸರ ಸ್ವಚ್ಛತೆ, ಸಮಯ ಪಾಲನೆ ಮೊದಲಾದವುಗಳ ಕುರಿತು ಮಾಹಿತಿ ನೀಡಿ, ಮಕ್ಕಳಲ್ಲಿ ಜಾಗೃತಿ ಮೂಡಿಸಿದರು.
ಶಾಲಾ ಮುಖ್ಯೋಪಾಧ್ಯಾಯಿನಿ ರೋಸ್ಲಿ ಡಯಾಸ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಶಾಲಾ ಎಸ್‍ಡಿಎಮ್‍ಸಿ ಅಧ್ಯಕ್ಷ ಜಿನ್ನಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಬನ್ನೂರು ಗ್ರಾಮ ಪಂಚಾಯತ್ ಸದಸ್ಯ ರತ್ನಾಕರ ಪ್ರಭು ಕಂಜೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಸಚಿನ್ ಕುಮಾರ್ ವೇದಿಕೆಯಲ್ಲಿ ಉಪಸ್ತಿತರಿದ್ದರು.
ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ದಿವ್ಯ ಕೆ ಎಸ್ ಸ್ವಾಗತಿಸಿ, ಶ್ರೀಜಿತ್ ಎಮ್ ವಂದಿಸಿ, ಸಾರಮ್ಮ ಟಿ ಜೆ ಕಾರ್ಯಕ್ರಮ ನಿರೂಪಿಸಿದರು.