ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಗಣಿತಶಾಸ್ತ್ರ ವಿಭಾಗ ಮತ್ತು ಐಕ್ಯುಎಸಿ ಸಹಯೋಗದಲ್ಲಿ ವಾಮಂಜೂರಿನ ಸೈಂಟ್ ಜೋಸೆಫ್ಸ್ ಇಂಜಿಯರಿಂಗ್ ಕಾಲೇಜಿನ ಜೊತೆ ನಡೆಯುವ ಒಡಂಬಡಿಕೆಯ ಭಾಗವಾಗಿ ಫೆಬ್ರವರಿ 17 ರಂದು ಸ್ನಾತಕೋತ್ತರ ಸಭಾಂಗಣದಲ್ಲಿ ‘ಅಡ್ವಾನ್ಸ್‍ಡ್ ಟೆಕ್ನಾಲಜಿಸ್ ಅಂಡ್ ನ್ಯೂ ಏಜ್ ಸ್ಕಿಲ್ಸ್ ಫಾರ್ ಪರ್ಸನಾಲಿಟಿ ಡೆವಲಪ್‍ಮೆಂಟ್’ ಮತ್ತು ‘ಸಮ್ ರಿಸರ್ಚ್ ಏರಿಯಾಸ್ ಇನ್ ರಿಂಗ್ ಥಿಯರೀಸ್’ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಕಾಲೇಜಿನ ಕ್ಯಾಂಪಸ್ ನಿರ್ದೇಶಕ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮುಖ್ಯಸ್ಥ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೆರೊ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಪ್ರಾಚಾರ್ಯ ಪ್ರೊ. ಲಿಯೋ ನೊರೊನ್ಹಾ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಂತ ಫಿಲೋಮಿನಾ ಕಾಲೇಜು ಮತ್ತು ಸೈಂಟ್ ಜೋಸೆಫ್ಸ್ ಇಂಜಿಯರಿಂಗ್ ಕಾಲೇಜಿನ ಜೊತೆ ಏರ್ಪಟ್ಟ ಒಡಂಬಡಿಕೆಯ ದಾಖಲೆ ಪತ್ರಗಳ ಪರಸ್ಪರ ವಿನಿಮಯವು ಜರಗಲಿರುವುದು. ಈ ಸಂದರ್ಭದಲ್ಲಿ ಸೈಂಟ್ ಜೋಸೆಫ್ಸ್ ಇಂಜಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಹಾಗೂ ವಿಭಾಗ ಮುಖ್ಯಸ್ಥ ಡಾ. ರಮಾನಂದ ಎಚ್ ಎಸ್ ಮತ್ತು ಸಹ ಪ್ರಾಧ್ಯಾಪಕ ಡಾ. ಜಗದೀಶ ಬಿ ಗೌರವ ಅತಿಥಿಗಳಾಗಿ ಪಾಲ್ಗೊಂಡು, ಎರಡು ವಿಶೇಷ ತಾಂತ್ರಿಕ ಗೋಷ್ಠಿಗಳನ್ನು ನಡೆಸಿಕೊಡಲಿದ್ದಾರೆ. ಸಾಯಂಕಾಲ ಸಮಾರೋಪ ಸಮಾರಂಭವು ಜರಗಲಿರುವುದು. ಸ್ನಾತಕೋತ್ತರ ಗಣಿತಶಾಸ್ತ್ರ ವಿಭಾಗದ ಸಂಯೋಜಕ ಪ್ರೊ. ಗಣೇಶ ಭಟ್ ಕೆ ಕಾರ್ಯಕ್ರಮವನ್ನು ಸಂಯೋಜಿಸಲಿದ್ದಾರೆ ಎಂದು ಕಾಲೇಜಿನ ಪಿಆರ್‍ಒ ತಿಳಿಸಿದ್ದಾರೆ.