ಪುತ್ತೂರು: ಪುತ್ತೂರಿನ ದೇರ್ಲ ಮೂಲದ, ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ (68)  ಶುಕ್ರವಾರ ಬೆಳಗ್ಗೆ ಎರಡು ಗಂಟೆ ಸುಮಾರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ಒಂದು ವರ್ಷದ ಹಿಂದೆ ಕ್ಯಾನ್ಸರ್ ಗೆ ತುತ್ತಾಗಿದ್ದ  ಅವರು ಕೆಲವು ದಿನದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎರಡು ದಿನಗಳಿಂದ ಚಿತಾಂಜನಕ ಸ್ಥಿತಿಯಲ್ಲಿದ್ದ ಅವರು, ಇಂದು ಬೆಳಂಬೆಳಗ್ಗೆ ಅಲ್ಲಿಯೇ ಕೊನೆಯುಸಿರು ಎಳೆದರು. 

ಅವರಿಗೆ ಇಬ್ಬರು ಪುತ್ರರು, ಮೂವರು ಸಹೋದರರು ಹಾಗೂ ಒಬ್ಬ ಸಹೋದರಿ ಇದ್ದಾರೆ.  ರಾಮನಗರ ತಾಲೂಕಿನ  ಬಿಡದಿಯಲ್ಲಿ ಇರುವ ಅವರ ಸ್ವಗೃಹದಲ್ಲಿ ಕೆಲವೇ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಇತ್ತೆಚೆಗಷ್ಟೆ ಸುದ್ದಿಗೋಷ್ಠಿ ನಡೆಸಿ, ಎಲ್ಲರಿಗು ಧನ್ಯವಾದ ಹೇಳಿದ್ದರು. ಜತೆಗೆ ಕ್ಯಾನ್ಸರ್ ಗೆದ್ದು ಬರುವುದಾಗಿಯು ಹೇಳಿದ್ದರು. ಆದರೆ ಕ್ಯಾನ್ಸರ್ ಗೆಲ್ಲಲು ಸಾಧ್ಯವಾಗದೆ ಇಹಲೋಕ ತ್ಯಜಿಸಿದ್ದಾರೆ.