ನವದೆಹಲಿ: ದೇಶಾದ್ಯಂತ ಕೊರೊನಾನ ಸೋಂಕಿತರ ಸಂಖ್ಯೆ ಪ್ರಮಾಣವು ಅಧಿಕವಾಗುತ್ತಿದ್ದು ಏತನ್ಮಧ್ಯೆ ಪ್ರಧಾನಿ ನರೇಂದ್ರ ಮೋದಿಯವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಜೂನ್‌ 16 ಮತ್ತು 17ರ ಎರಡು ದಿನಗಳ ಕಾಲ ಮೆಗಾ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.

         ಈ ಮೊದಲು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫೆರೆನ್ಸ್‌ ನಡೆಸಿದ್ದು ಲಾಕ್‌ಡೌನ್‌ ಸಡಿಲಿಕೆ ಮಾಡಿದ ಬಳಿಕ ಮೊದಲ ಬಾರಿಗೆ ಎರಡು ದಿನಗಳ ಕಾಲ ಕಾನ್ಫೆರೆನ್ಸ್‌ ಸಭೆ ಕರೆದಿದ್ದಾರೆ. ಈ ಸಂದರ್ಭದಲ್ಲಿ ಕೊರೊನಾ ಸೋಂಕಿನ ಬಗೆಗೆ ಮಹತ್ವದ ಚರ್ಚೆ ನಡೆಯುವ ಸಾಧ್ಯತೆಗಳು ಇವೆ.

ಮೊದಲನೆಯ ದಿನ ಜೂನ್ 16ರಂದು 21 ರಾಜ್ಯಗಳ ಮುಖ್ಯಮಂತ್ರಿಗಳು, ಎರಡನೇ ದಿನ ಜೂನ್‌ 17ರಂದು 15 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಸಭೆ ನಡೆಸಲಿದ್ದಾರೆ.