ಮಂಗಳೂರು,(ಮಾರ್ಚ್ 05):- ಕರ್ನಾಟಕ ಸರ್ಕಾರದ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಎಸ್. ಸುರೇಶ್ ಕುಮಾರ್ ರವರು ಮಾರ್ಚ್ 6 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಮಾರ್ಚ್ 6 ರಂದು ಬೆಳಿಗ್ಗೆ 10 ಗಂಟೆಗೆ ಸುಳ್ಯ ಸ್ನೇಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ “ಸ್ನೇಹಯಾನ” - ಸ್ನೇಹ ಶಾಲೆಯ ಬೆಳ್ಳಿಹಬ್ಬ ಮತ್ತು ಡಾ. ಚಂದ್ರಶೇಖರ ದಾಮ್ಲೆ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1.30ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.