ಪುತ್ತೂರು: ಮಂಗಳೂರು ವಿವಿಯು 2018ರ ಡಿಸೆಂಬರ್ ತಿಂಗಳಲ್ಲಿ ನಡೆಸಿದ ಸ್ನಾತಕೋತ್ತರ ವಿಭಾಗದ ಸೆಮಿಸ್ಟರ್ ಪರೀಕ್ಷೆಯಲ್ಲಿ ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದಿಂದ ತೃತೀಯ ಸೆಮಿಸ್ಟರ್ ಪರೀಕ್ಷೆಗೆ ಹಾಜರಾದ 20 ವಿದ್ಯಾರ್ಥಿಗಳಲ್ಲಿ 17 ಮಂದಿ ವಿಶಿಷ್ಟ ಶ್ರೇಣಿ ಮತ್ತು 3 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ, ಶೇಕಡಾ 100 ಫಲಿತಾಂಶ ಬಂದಿರುತ್ತದೆ. ಈ ಪರೀಕ್ಷೆಯಲ್ಲಿ ಸಿಂಧೂ ಡಿ ಜೆ ಶೇಕಡಾ 87 ಅಂಕ ಗಳಿಸಿ, ಪ್ರಥಮ ಸ್ಥಾನ ಗಳಿಸಿರುವರು ಎಂದು ಕಾಲೇಜಿನ ಪಿಆರ್‍ಒ ಪ್ರಕಟಣೆ ತಿಳಿಸಿದೆ.