ಬಂಗಾರಪೇಟೆ: ಹಿಂದುಳಿದ ವರ್ಗಗಳ ಮಕ್ಕಳನ್ನು ಶಿಕ್ಷಣದಿಂದ ದೂರ ಇಡಬೇಕೆಂಬ ದುರಾಲೋಚನೆಯಿಂದ ಬಡ ಮಕ್ಕಳ ವಿದ್ಯಾರ್ಥಿ ವೇತನವನ್ನು ನಿಲ್ಲಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಜನಾಧಿಕಾರ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿ ವಿದ್ಯಾರ್ಥಿನಿಯರು ತಾಲ್ಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಸರ್ಕಾರ ಈ ಆದೇಶದಿಂದ ರಾಜ್ಯದ 15 ಲಕ್ಷ ಮಕ್ಕಳಿಗೆ ಅನ್ಯಾಯವಾಗಲಿದ್ದು, ಅವರ ಶೈಕ್ಷಣಿಕ ಪ್ರಗತಿಗೆ ಅಡ್ಡಿ ಉಂಟಾಗಲಿದೆ. ಆದ್ದರಿಂದ ಮುಖ್ಯಮಂತ್ತಿ ಬಿ.ಎಸ್.ಯಡಿಯೂರಪ್ಪ ಹಾಗೂ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರುಗಳು ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಮುಖಂಡರುಗಳಾದ ಹೂವರಸನಹಳ್ಳಿ ರಾಜಪ್ಪ, ಅಜಿತ್ ಕುಮಾರ್, ಲಯನ್ ಜಗಧೀಶ್, ಟಿ.ಎನ್.ರಾಮೇಗೌಡ, ಮಾಲತಿ, ರಾಮಮೂರ್ತಿ, ವಿ.ಯಲ್ಲಪ್ಪ, ಸುಭಾಷ್, ವೆಂಕಟೇಶ್ ಜಗಧೀಶ್, ಶಾಂತಮ್ಮ, ಸರೋಜ, ಎಂ.ಜಿ.ವೆಂಕಟೇಶ್, ಮುನಿಕೃಷ್ಣಪ್ಪ, ಮಾರುತಿ ಪ್ರಸಾದ್, ಮುನಿರಾಜ್, ಆದಿನಾರಾಯಣ ಸೇರಿದಂತೆ ತಾಲ್ಲೂಕಿನ ವಿವಿಧ ಕಾಲೇಜುಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.