ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ , ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾ.ಪಂ. ಮತ್ತು ಕಂದಾಯ ಇಲಾಖೆ ಹಾಗೂ ಇತರ ಸರಕಾರಿ ಇಲಾಖೆಗಳ ಸಹಯೋಗದೊಂದಿಗೆ ಸರಕಾರಿ ಶಾಲೆ ಕೊಡಂಗೆ ಯಲ್ಲಿ ಕಾನೂನು ಸಾಕ್ಷರಥಾ ಮತ್ತು ಸಂಚಾರಿ ನ್ಯಾಯಾಲಯದ ಕಾನೂನು ಮಾಹಿತಿ ಶಿಬಿರವನ್ನು ಹಿರಿಯ ಸಿವಿಲ್ ನ್ಯಾಯಾಧೀ ಶರಾದ ಮಹಮ್ಮದ್ ಇಮ್ತಿಯಾಝ್ ಅಹಮ್ಮದ್ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು. ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ನ್ಯಾಯವಾದಿ ಶಿವಪ್ರಕಾಶ್ ಸಂವಿಧಾನದ ಮೂಲಭೂತ ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ತಾ.ಪಂ. ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ನೋಣಯ್ಯ ನಾಯ್ಕ್ ಎನ್. , ಮುಖ್ಯೋಪಾಧ್ಯಾಯರಾದ ಭಾಸ್ಕರ್ ರಾವ್, ನ್ಯಾಯವಾದಿಗಳಾದ ಎ.ಕೆ.ರಾವ್, ಆಶಾಮಣಿ, ರಾಜೇಶ್ ಬೊಳ್ಳುಕಲ್ಲು , ಸತೀಶ್ ಬಿ. ಮತ್ತಿತರರು ಉಪಸ್ಥಿತರಿದ್ದರು.