ಬಂಟ್ವಾಳ : ವಿದ್ಯಾರ್ಥಿ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುವುದರ ಮೂಲಕ ಸಾಮಾನ್ಯ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ಯುವಜನತೆಗೆ ಹೊಸ ಆವಿಷ್ಕಾರಗಳನ್ನು ತಿಳಿದುಕೊಳ್ಳುವ ಅಸಕ್ತಿ ಜತೆ ವಿಜ್ಞಾನದ ಉಪಯೋಗಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಎಂದು ಪುತ್ತೂರು ವಿವೇಕಾನಂದ ಕಾಲೇಜು ಭೌತಶಾಸ್ತ್ರ ಪ್ರಾಧ್ಯಾಪಕ ಶ್ರೀಶಾ ಭಟ್ ಹೇಳಿದರು.ಅವರು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ಸಂಘದ ಆಶ್ರಯದಲ್ಲಿ ನಡೆದ ‘ವಿಜ್ಞಾನ ಮತ್ತು  ಜೀವನ’ ಎಂಬ ವಿಷಯದ ಕುರಿತು ವಿಶೇಷ  ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.ಪ್ರಶ್ನಿಸುವ ಮನೋಭಾವವನ್ನು ಬೆಳೆಸಿಕೊಳ್ಳುವುದರ ಜತೆ ಯಾವುದೇ ಒಂದು ವಿಷಯದ ಬಗ್ಗೆ ಮಾತನಾಡುವ ಕೌಶಲ್ಯವನ್ನೂ ಬೆಳೆಸಿಕೊಳ್ಳಬೇಕು ಎಂದರು.ಬಂಟ್ವಾಳ ಎಸ್.ವಿ.ಎಸ್. ಪ.ಪೂ ಕಾಲೇಜು ಪ್ರಾಂಶುಪಾಲೆ ಶಶಿಕಲಾ ಕೆ. ಅಧ್ಯಕ್ಷತೆ ವಹಿಸಿ ಯುವಜನತೆ ಬದುಕಿನಲ್ಲಿ  ಮೌಲ್ಯಗಳನ್ನೂ ಅಳವಡಿಸಿಕೊಂಡರೆ ಪರಿಪೂರ್ಣ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿಕ್ಷೇಮಾಪಾಲನಾಧಿಕಾರಿ ಬಾಲಕೃಷ್ಣ ಗೌಡ, ಕವಿತಾ, ಮೌಲ್ಯ ಸಿ.ಜೆ, ಶೃತಿ ಮತ್ತಿತರರು ಉಪಸ್ಥಿತರಿದ್ದರು.ವಿಜ್ಞಾನ ಸಂಘದ ಸಲಹೆಗಾರೆ ಚೈತ್ರಾ ಆರ್. ಸಹಕರಿಸಿದರು. ವಿದ್ಯಾರ್ಥಿನಿಯರಾದ ಶ್ವೇತಾ ಪೈ, ಸಂಜನಾ ಪೈ, ಅನನ್ಯಾ ಡಿ. ಆರ್, ಭುವನಾ ಚಂದ್ರಹಾಸ ಪ್ರಾರ್ಥಿಸಿದರು. ವಿಜ್ಞಾನ ಸಂಘದ ಅಧ್ಯಕ್ಷೆ ಮತ್ತು ಭೌತಶಾಸ್ತ್ರ ಉಪನ್ಯಾಸಕಿ ತೇಜಸ್ವಿ ಪ್ರಾಸ್ತಾವಿಕ ಮಾತುಗಳೊಂದಿಗೆ ಅತಿಥಿ ಪರಿಚಯಿಸಿದರು. ವಿಜ್ಞಾನ ಸಂಘದ ಕಾರ್ಯದರ್ಶಿ ವಿವೇಕ್ ಪೈ ಸ್ವಾಗತಿಸಿ, ಜತೆಕಾರ್ಯದರ್ಶಿ ವೈಷ್ಣವಿ ಸಿ. ವಂದಿಸಿದರು. ವಿದ್ಯಾರ್ಥಿನಿ ಕುಶಿ ಎ. ಚೌಟ ಕಾರ್ಯಕ್ರಮ ನಿರೂಪಿಸಿದರು.