ದೇಶದಲ್ಲಿ ಕೋವಿಡ್-19 ಸೋಂಕಿಗೆ ಒಳಗಾಗುತ್ತಿರುವವರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಾಣುತ್ತಿದೆ. ರವಿವಾರ ಒಂದೇ ದಿನ 14,821 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇದರಿಂದ ದೇಶದ ಒಟ್ಟು ಸೋಂಕಿತರ ಸಂಖ್ಯೆ 4.25 ಲಕ್ಷಕ್ಕೇರಿದೆ.

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 445 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇದರಂದ ದೇಶದಲ್ಲಿ ಕೋವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 13,699ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಇದುವರೆಗೆ ಒಟ್ಟು 425,382 ಜನರಿಗೆ ಕೋವಿಡ್-19 ಸೋಂಕಿಗೆ ಒಳಗಾಗಿದ್ದಾರೆ. ಇದರಲ್ಲಿ 174,387 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ 237,196 ಜನರು ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿಯಾಗಿದೆ.

ರವಿವಾರ ಸಂಜೆಯ ಆರೋಗ್ಯ ಇಲಾಖೆ ವರದಿಯಂತೆ ಕರ್ನಾಟಕ ರಾಜ್ಯದಲ್ಲಿ 9150 ಸೋಂಕಿತರಿದ್ದಾರೆ. ರವಿವಾರ ಒಂದೇ ದಿನ 453 ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿತ್ತು. ರಾಜ್ಯದ ಬೆಂಗಳೂರು ನಗರ, ಕಲಬುರಗಿ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟಿದೆ.