ದೇಶದಲ್ಲಿ ಕರೋನ ವೈರಸ್ ಅಟ್ಟಹಾಸ ಜೋರಾಗಿದ್ದು , ಒಂದೇ ದಿನದಲ್ಲಿ ಭಾರತವು 14,933 ಹೊಸ ಪ್ರಕರಣಗಳನ್ನು ದಾಖಲಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಬೆಳಿಗ್ಗೆ ತಿಳಿಸಿದೆ.
ನವೀಕರಿಸಿದ ಅಂಕಿ ಅಂಶಗಳ ಪ್ರಕಾರ, ಭಾರತದ ಕರೋನ ವೈರಸ್ ಪ್ರಕರಣಗಳ ಸಂಖ್ಯೆ ಇದೀಗ 4,40,215 ಕ್ಕೆ ಏರಿಕೆಯಾಗಿದೆ, ಕೋವಿಡ್ -19 ಕಾರಣದಿಂದಾಗಿ ಕಳೆದ 24 ಗಂಟೆಗಳಲ್ಲಿ 312 ಜನ ಸಾವನ್ನಪ್ಪಿದ್ದು, ಒಟ್ಟು 14,011 ಜನರು ಸಾವನ್ನಪ್ಪಿದ್ದಾರೆ.
ದೇಶದಲ್ಲಿ 1,78,014 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 2,48,189 ಪ್ರಕರಣಗಳು ಚೇತರಿಸಿಕೊಂಡಿವೆ. ಕಳೆದ 24 ಗಂಟೆಗಳಲ್ಲಿ ಸುಮಾರು 11,000 ರೋಗಿಗಳು ಚೇತರಿಸಿಕೊಂಡಿದ್ದಾರೆ ಎನ್ನಲಾಗಿದೆ.