ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮಾರ್ಚ್ 28 ರಂದು ಪೂರ್ವಾಹ್ನ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಪುತ್ತೂರು ಸರ್ಕಾರಿ ಪ್ರವಾಸಿ ಮಂದಿರ ಪುತ್ತೂರು ತಾಲೂಕು ಮತ್ತು ಮಾರ್ಚ್ 29 ರಂದು ಪೂರ್ವಾಹ್ನ 11 ಗಂಟೆಯಿಂದ ಮದ್ಯಾಹ್ನ 1 ಗಂಟೆಯ ವರೆಗೆ ಬೆಳ್ತಂಗಡಿ ಸರ್ಕಾರಿ ಪ್ರವಾಸಿ ಮಂದಿರ ಬೆಳ್ತಂಗಡಿ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ ಎಂದು ಪೊಲೀಸ್ ಉಪಾಧೀಕ್ಷಕರು, ಎಸಿಬಿ, ದ.ಕಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.