ಮಂಗಳೂರು: ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವಾಗಲೇ ಮಂಗಳೂರಿನ ಐವರು ವೈದ್ಯರಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ.

     ನಗರದ ಕೋವಿಡ್ ಆಸ್ಪತ್ರೆ, ಲೇಡಿಗೋಷನ್ ಆಸ್ಪತ್ರೆ ಮತ್ತು ಖಾಸಗಿ ಅಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಐವರು ವೈದ್ಯರಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿರುವುದು ದೃಢವಾಗಿದೆ. 28 ವರ್ಷದ ಯುವಕ, 28 ವರ್ಷದ ಇಬ್ಬರು ಯುವತಿಯರು ಮತ್ತು 27 ವರ್ಷದ ಇಬ್ಬರು ಯುವತಿಯರು ಸೋಂಕಿಗೆ ಒಳಗಾಗಿದೆ. ಇವರಲ್ಲಿ ಒಬ್ಬರು ಕೋವಿಡ್ ಆಸ್ಪತ್ರೆಯಲ್ಲಿ, ಮೂವರು ಲೇಡಿಗೋಷನ್ ಹೆರಿಗೆ ಆಸ್ಪತ್ರೆ, ಒಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು

      ಈ ಐವರಿಗೆ ಕೋವಿಡ್-19 ಸೋಂಕು ತಾಗಿರುವ ಕಾರಣ 30 ಜನ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳಿಗೆ ಕ್ವಾರಂಟೈನ್ ಮಾಡಲು ಸೂಚಿಸಲಾಗಿದೆ.